ಪೂರ್ಣಪ್ರಜ್ಞ ಕಾಲೇಜಿನಲ್ಲಿ ಉದ್ಯೋಗ ಮೇಳ
ಉಡುಪಿ : ಪೂರ್ಣಪ್ರಜ್ಞ ಪದವಿ ಕಾಲೇಜಿನ ವತಿಯಿಂದ ಪದವೀಧರ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಸೋಮ ವಾರ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಮೇಳವನ್ನು ಕಾಲೇಜಿನ ಗೌರವ ಕೋಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ ಉದ್ಘಾಟಿಸಿ ಮಾತನಾಡಿ, ಉದ್ಯೋಗ ರಂಗದಲ್ಲಿ ಕೌಶಲ್ಯಗಳು ಅಗತ್ಯವಾಗಿದ್ದು ಕಾಲೇಜಿನ ವತಿಯಿಂದ ನಡೆಯುತ್ತಿರುವ ಉದ್ಯೋಗ ಮೇಳವು ಉದ್ಯೋಗಾ ಕಾಂಕ್ಷಿಗಳಿಗೆ ಉತ್ತಮ ವೇದಿಕೆಯಾಗಿ ಕಾರ್ಯ ನಿರ್ವಹಿಸು ತ್ತಿರುವುದು ಸಂತೋಷದ ವಿಚಾರ ಎಂದರು.
ಕುಂದಾಪುರದ ಸೃಷ್ಟಿ ಇನ್ಫೋಟೆಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಹರ್ಷವರ್ಧನ್ ಶೆಟ್ಟಿ ಹಾಗೂ ಸಂಧ್ಯಾರಾಣಿ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಉದ್ಯೋಗ ಮೇಳದಲ್ಲಿ ೧೭೦೦ಕ್ಕಿಂತಲೂ ಅಧಿಕ ಆಕಾಂಕ್ಷಿಗಳು ನೋಂದಾವಣಿಯನ್ನು ಮಾಡಿದ್ದರು. ೨೦ಕ್ಕೂ ಅಧಿಕ ಕಂಪೆನಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.
ಉಪಪ್ರಾಂಶುಪಾಲ ಡಾ.ಪ್ರಕಾಶ್ ರಾವ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರಮೇಶ್ ಟಿ.ಎಸ್., ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಮೋಹನ್ ಉಡುಪ, ಐಕ್ಯೂಎಸಿ ಸಂಯೋಜಕ ಡಾ. ವಿನಯ್ ಕುಮಾರ್ ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಸಂಯೋಜಕ ಡಾ.ಆನಂದ ಆಚಾರ್ಯ ಉಪಸ್ಥಿತರಿದ್ದರು.
ಜಯಲಕ್ಷ್ಮಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿ, ಮುರಳಿ ವಂದಿಸಿದರು.