ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕುಂದಾಪುರ, ನ.2: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸ್ಯೆಯದ್ ಮುಹಮ್ಮದ್ ಬ್ಯಾರಿ ಕನ್ನಡ ನಾಡು ನುಡಿ ಅಭಿಮಾನ ದೊಂದಿಗೆ ರಾಜ್ಯೋತ್ಸವಕ್ಕೆ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಸಂಭ್ರಮವಾಗಿರದೆ ಕನ್ನಡಿಗರ ಬದುಕಿನ ನಿತ್ಯೋತ್ಸವವಾಗಲಿ ಎಂದು ಹೇಳಿದರು.
ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯ ಡಾ.ಆಸೀಫ್ ಬ್ಯಾರಿ, ಸಂಯೋಜಕ ಆಕಾಶ್ ಎಸ್., ಚಕ್ರೇಶ್ವರಿ ದೇವಳದ ಧರ್ಮದರ್ಶಿ ಗೋಪಾಲ ಪೂಜಾರಿ, ನಾಗರಾಜ್ ಕಾಂಚನ್, ಕುಂದಾಪುರ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ರಫೀಕ್ ಬಿಎಸ್‌ಎಫ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಶಾಲಾಭಿವೃದ್ಧಿ ಹಾಗೂ ಸಲಹಾ ಮಂಡಳಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಜಯಶೀಲ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕ ಡಾ. ಸಂದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.