ಕಾಪು ತಾಲೂಕು ಸಾಹಿತ್ಯ ಸಮ್ಮೇಳನ: ಕಾರ್ಯಾಧ್ಯಕ್ಷರಾಗಿ ಕೆ.ಆರ್.ಪಾಟ್ಕರ್ ಆಯ್ಕೆ

Update: 2023-10-07 13:06 GMT

ಶಿರ್ವ, ಅ.7: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ವತಿಯಿಂದ ನ.4ರಂದು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ಜರಗಲಿರುವ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಶಿರ್ವ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಆರ್.ಪಾಟ್ಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿಕ್ಷಕ ಎಸ್.ಎಸ್.ಪ್ರಸಾದ್ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ತಾಂತ್ರಿಕ ಮಹಾವಿದ್ಯಾಲಯದ ಕಾರ್ಯಾಲಯದಲ್ಲಿ ಗುರುವಾರ ಜರಗಿದ ಪೂರ್ವ ಸಿದ್ಧತಾ ಸಭೆಯಲ್ಲಿ ಸ್ವಾಗತ ಸಮಿತಿ ಹಾಗೂ ಪೂರಕ ಉಪಸಮಿತಿಗಳನ್ನು ರಚಿಸಲಾಯಿತು. ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು.

ತಾಲೂಕು ಸಮಿತಿಯ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸಮ್ಮೇಳನದ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸೋದೆ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನ ಕುಮಾರ್, ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿದರು.

ಸಭೆಯಲ್ಲಿ ತಾಲೂಕು ಸಮಿತಿಯ ಪದಾಧಿಕಾರಿಗಳು, ಬಂಟಕಲ್ಲು ಶ್ರೀದುರ್ಗಾ ಪರಮೇಶ್ವರೀ ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ರೋಟರಿ ನಿಯೋಜಿತ ಸಹಾಯಕ ಗವರ್ನರ್ ಅನಿಲ್ ಡೇಸಾ ಶಂಕರಪುರ, ತಾಂತ್ರಿಕ ಕಾಲೇಜಿನ ಉಪನ್ಯಾಸಕಿ ಡಾ.ರವಿಪ್ರಭಾ ಕೆ., ರೋಶನ್ ಕೊಟ್ಯಾನ್, ತಾಲೂಕು ಗೌರವ ಕಾರ್ಯದರ್ಶಿ ನೀಲಾನಂದ ನಾಯ್ಕ್, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಮಧು ಕರ್ ಎಸ್., ಅನಂತ ಮೂಡಿತ್ತಾಯ, ಡಿ.ಆರ್.ನೊರೋನ್ಹಾ, ಗ್ರೆಟ್ಟಾ ಮೋರಾಸ್, ಕೃಷ್ಣಕುಮಾರ್ ರಾವ್ ಮಟ್ಟು, ಸುಂದರ ಬಿ. ಉಪಸ್ಥಿತರಿ ದ್ದರು. ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News