ಕಾರ್ಕಳ| ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಸೆರೆ

Update: 2024-08-23 18:11 GMT

ಕಾರ್ಕಳ : ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಯುವಕ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಎಂಬಾತನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News