ಕಾರ್ಕಳ : ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ
ಕಾರ್ಕಳ: ವೈಯಕ್ತಿಕ ಓರೆ ಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವನೆ ಬಳಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ ಮಾನಸಿಕ ಬೆಳವಣಿಗೆಗೆ ಕ್ರೀಡೆಯ ಅವಶ್ಯಕತೆ ಇದೆ. ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಆರೋಗ್ಯ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬಹುದು ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರವಿಚಂದ್ರ ಕಾರಂತ್ ಹೇಳಿದರು.
ಡಾನ್ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆ ಮುಲ್ಲಡ್ಕ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಫುಟ್ಬಾಲ್ ಪಂದ್ಯಾಟ ದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಬಿ.ಎ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಪಳಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ,ಶಾಲಾ ಸಂಚಾಲಕ ಅರವಿಂದ್ ಸೆವಾರಿಸ್ , ಆಡಳಿತ ಅಧಿಕಾರಿ ವಿಲ್ಲಿಸ್ ಪಿಂಟೋ, ಪ್ರಾಂಶುಪಾಲ ಮಿಲ್ಟನ್ ಫೆರ್ನಾಂಡಿಸ್, ರವೀಂದ್ರ ಶೆಟ್ಟಿ ಪರಾರಿ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಹೆರ್ರಿ ,ಎಲ್ಸಿ ಡಿಮೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.