ಕಾರ್ಕಳ | ಟಿಪ್ಪರ್ ಬೈಕ್ ಢಿಕ್ಕಿ,: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2024-07-29 06:59 GMT

ಕಾರ್ಕಳ, ಜು.29: ಬೈಕಿಗೆ ಟಿಪ್ಪರ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ

ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಝ್ ಎಂಬವರ ಪುತ್ರ ನಿಝಾಮ್ (22) ಮೃತಪಟ್ಟವರು.

 

ಇವರು ಸಾಣೂರಿನಿಂದ ಕೆಲಸಕ್ಕೆಂದು ಬೆಳಗ್ಗೆ 10:30ರ ಸುಮಾರಿಗೆ ಕಾರ್ಕಳ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಅತಿವೇಗದಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ನಿಝಾಮ್ ಟಿಪ್ಪರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News