ಕಾರ್ಕಳ: ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ಅನೈತಿಕ ಪೊಲೀಸ್ ಗಿರಿ: ಐವರು ಸಂಘಪರಿವಾರದ ಕಾರ್ಯಕರ್ತರ ಬಂಧನ

Update: 2023-08-02 05:56 GMT

ಉಡುಪಿ, ಆ.2: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ  ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಸಂಘ ಪರಿವಾರದ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ.

ಜು.29ರಂದು ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಬೆನ್ನಟ್ಟಿಕೊಂಡು ಬಂದು ಅಡ್ಡಗಟ್ಟಿದ ಸಂಘಪರಿವಾರದ ಕಾರ್ಯಕರ್ತರು, ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆಂದು ದೂರಲಾಗಿದೆ.

ಕಾರಿನಲ್ಲಿದ್ದ ಮಹಿಳೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಆಗಮಿಸಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News