ಕರ್ನಾಟಕ-50: ಲಾಂಛನ ಸ್ಪರ್ಧೆಗೆ ಆಹ್ವಾನ

Update: 2023-09-19 15:11 GMT

ಉಡುಪಿ, ಸೆ.19: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ-50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ.

ಕಾರ್ಯಕ್ರಮದ ಪ್ರಯುಕ್ತ ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ(ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ (ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25,000ರೂ.ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.

ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆ.30ರವರೆಗೆ ಅವಕಾಶವಿದೆ. ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ - www.kannadasiri.karnataka.gov.in-ದಲ್ಲಿ ಪಡೆಯ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News