ಕರ್ನಾಟಕ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ನಿಯಮಗಳು

Update: 2023-10-16 14:42 GMT

ಉಡುಪಿ, ಅ.16: ಕರ್ನಾಟಕ ನೈರುತ್ಯ ಪದವೀಧರರ/ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಮತದಾರರ ನೋಂದಣಿ ನಿಯಮಗಳನ್ನು ಪ್ರಕಟಿಸಲಾಗಿದೆ.

ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಗೆ ಮತದಾರರ ನೋಂದಣಿ ನಿಯಮಗಳು 1960ರ 31(4)ನೇ ನಿಯಮದ ಅನುಸಾರ ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಸಂಬಂಧಿಸಿದ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ನೋಂದಣಿ ನಿಯಮಗಳು 1960ಕ್ಕೆ ಲಗತ್ತಿಸಿರುವ ಮತ್ತು ಎರಡನೇ ಅನುಸೂಚಿಯಲ್ಲಿ ಪುನರುದ್ಧರಿಸಿರುವ ನಮೂನೆ-19 ರಲ್ಲಿ ಅರ್ಜಿ ಯನ್ನು 2023ರ ನವೆಂಬರ್ 6 ಅಥವಾ ಅದಕ್ಕೂ ಮೊದಲು ಸಂಬಂದಪಟ್ಟ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿತ್ತು.

ಮೇಲೆ ತಿಳಿಸಲಾದ ಎಲ್ಲಾ ವ್ಯಕ್ತಿಗಳು ತಮ್ಮ ಹೆಸರನ್ನು ಇದುವರೆಗೂ ಸೇರಿಸದೆ ಇದ್ದಲ್ಲಿ ನಿಗದಿತ ನಮೂನೆ-19ರಲ್ಲಿ 2023ರ ನವೆಂಬರ್ 6ರ ಒಳಗೆ ಅಥವಾ ಅದಕ್ಕೂ ಮುಂಚೆ ಅರ್ಜಿಗಳನ್ನು ಸಲ್ಲಿಸಬಹುದು.

ನೈರುತ್ಯ ಪದವೀಧರರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಗೆ ಮತದಾರರ ನೋಂದಣಿ ನಿಯಮಗಳು 1960ರ 31(4) ನೇ ನಿಯಮದ ಅನುಸಾರ ಕರ್ನಾಟಕ ನೈರುತ್ಯ ಪದೀಧರ ಮತ ಕ್ಷೇತ್ರಗಳ ಮತದಾರರ ನೋಂದ ಣಾಧಿಕಾರಿಗಳು ಸಂಬಂಧಿಸಿದ ಪದವೀಧರರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿ ಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ನೋಂದಣಿ ನಿಯಮಗಳು 1960ಕ್ಕೆ ಲಗತ್ತಿಸಿರುವ ಮತ್ತು ಎರಡನೇ ಅನುಸೂಚಿಯಲ್ಲಿ ಪುನರುದ್ಧರಿಸಿರುವ ನಮೂನೆ-18 ರಲ್ಲಿ ಅರ್ಜಿಯನ್ನು 2023 ರ ನವೆಂಬರ್ 6 ಅಥವಾ ಅದಕ್ಕೂ ಮೊದಲು ಸಂಬಂದಪಟ್ಟ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಬಹುದು.


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News