ಕೋಡಿ: ನವಭಾರತ ಸಾಕ್ಷರತಾ ಕಾರ್ಯಕ್ರಮ

Update: 2023-10-20 20:06 IST
ಕೋಡಿ: ನವಭಾರತ ಸಾಕ್ಷರತಾ ಕಾರ್ಯಕ್ರಮ
  • whatsapp icon

ಕುಂದಾಪುರ, ಅ.20: ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆ(ಡಯಟ್) ಉಡುಪಿ ಇದರ ಸಹಯೋಗದೊಂದಿಗೆ 2023- 24ನೇ ಸಾಲಿನ ಎಂಐಎಲ್‌ಪಿ ಅಡಿಯಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕ ಆಕಾಶ್ ಎಸ್. ಕನ್ನಡ ವರ್ಣಮಾಲೆಯನ್ನು ಪ್ರದರ್ಶಿಸುವ ಮೂಲಕ ಮತ್ತು ಸಾಕ್ಷರತಾ ಸಂಬಂಧಿ ಚಾರ್ಟನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾಕ್ಷರತಾ ಕಾರ್ಯಕ್ರಮ ಎನ್ನುವುದು ಕುಟುಂಬದಿಂದ ಆರಂಭವಾಗಬೇಕು. ಕುಟುಂಬದಲ್ಲಿನ ನೆರೆಹೊರೆಯಲ್ಲಿನ ಅನಕ್ಷರಸ್ಥರನ್ನು ಗುರುತಿಸಿ ಶಿಕ್ಷಣ ವಂಚಿತರಿಗೆ ಬೆಳಕಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ಯೋಗ ನರಸಿಂಹ ಸ್ವಾಮಿ, ಪಿಪಿಟಿ ಪ್ರದರ್ಶನದ ಮೂಲಕ ನವಭಾರತ ಸಾಕ್ಷರತಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಸ್ವಯಂ ಪ್ರೇರಿತ ರಾಗಿ, ಸ್ವಯಂ ಸೇವಕರಾಗಿ ಸಾಕ್ಷರತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿ ಗಳನ್ನು ಅಭಿ ಪ್ರೇರಿಸಿದರು.

ಜಿಲ್ಲಾ ಕಾರ್ಯಕ್ರಮ ಸಹಾಯಕ ಶ್ವೇತಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪಕೆ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ದರು. ಉಪನ್ಯಾಸಕ ಅನಂತ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವೆಂಕಟೇಶ್ ಎಸ್. ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News