ಕೋಟ: ಆನ್‌ಲೈನ್ ಬೆಟ್ಟಿಂಗ್ ಹೆಸರಿನಲ್ಲಿ 7ಲಕ್ಷ ರೂ. ವಂಚನೆ
Update: 2023-12-03 14:47 GMT
ಕೋಟ, ಡಿ.3: ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಲಾಭ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯಿಂದ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವೀಣ ಹಾಗೂ ಅಜಿತ್ ಕುಮಾರ್ ಎಂಬವರು ಆದಿತ್ಯ ಎಂಬವರಲ್ಲಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಆಡಿದರೆ ಹಣ ಡಬ್ಬಲ್ ಆಗುತ್ತದೆ ಎಂಬುದಾಗಿ ನಂಬಿಕೆ ಹುಟ್ಟಿಸಿ ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿದ್ದರು. ಆರೋಪಿಗಳಿಬ್ಬರೂ ಆದಿತ್ಯ ಅವರಿಂದ ಒಟ್ಟು 7,00,000 ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಮಾಡಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.