ಸಂಸದ ಕೋಟ ಶ್ರೀನಿವಾಸ್ ಪೂಜಾರಿಗೆ ಮಾತೃ ವಿಯೋಗ

Update: 2024-06-30 14:01 GMT

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ(97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನರಾದರು.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News