ಡಿಕೆಶಿ ವಿರುದ್ಧ ಕುಂದಾಪುರ ಬಿಜೆಪಿ ಪ್ರತಿಭಟನೆ
Update: 2025-03-26 19:25 IST

ಕುಂದಾಪುರ: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಮಂಗಳವಾರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾದ್ಯಕ್ಷೆ ವನಿತಾ ಬಿಲ್ಲವ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಡಿಕೆ ಶಿವಕುಮಾರ್ ರವರ ಪ್ರತಿಕೃತಿ ದಹಿಸಿಲಾಯಿತು.