ಕುಂದಾಪುರ -ಬೈಂದೂರು ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ

Update: 2023-09-12 14:13 GMT

ಕುಂದಾಪುರ, ಸೆ.12: ಪ್ರತಿ ವಿಚಾರದಲ್ಲಿ ಅವಕಾಶಗಳು ನಮಗಾಗಿ ಕಾಯು ತ್ತಿರುತ್ತದೆ. ಸೋಲಾದಾಗ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಸತತ ಪರಿಶ್ರಮ, ಪ್ರಯತ್ನಗಳ ಮೂಲಕ ಗೆಲುವು ಸಿಗುತ್ತದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದ್ದಾರೆ.

ಉಡುಪಿ ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಂದಾ ಪುರದ ಗಾಂಧಿ ಮೈದಾನದಲ್ಲಿ ಮಂಗಳವಾರ ಜರಗಿದ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಮಂಜುನಾಥ, ಸದಸ್ಯ ಸಂತೋಷ್ ಶೆಟ್ಟಿ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾಯಕ ಅಧಿಕಾರಿ ಪ್ರಭಾಕರ್ ಉಪಸ್ಥಿತರಿದ್ದರು.

ಕುಂದಾಪುರ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾಯಕ ಅಧಿಕಾರಿ ಕುಸುಮಾಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News