ಕುಂದಾಪುರ: ಕಾರು -ರಿಕ್ಷಾ ಢಿಕ್ಕಿ; ಯುವತಿ ಮೃತ್ಯು

Update: 2023-09-02 06:06 GMT

ಕುಂದಾಪುರ: ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಮೃತಪಟ್ಟ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.

ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿ ನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅಂಬಿಕಾ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News