ಕುಂದಾಪುರ ತಾಲೂಕು ಮಟ್ಟದ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ

Update: 2024-09-04 14:14 GMT

ಕುಂದಾಪುರ, ಸೆ.4: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕೋಡಿ ಹಾಜಿ ಕೆ.ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆಯ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಬುಧವಾರ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಛಲವೊಂದಿದ್ದರೆ ಯಾವ ಸಾಧ ನೆಯೂ ಕಷ್ಟವಲ್ಲ. ಶಿಸ್ತಿನೊಂದಿಗೆ ಮನೋಬಲ ಹಾಗೂ ದೇಹ ಬಲವನ್ನು ಹೆಚ್ಚಿಸಿಕೊಳ್ಳಬೇಕು. ಹಾಗಾಗಿ ಆರೋಗ್ಯವಂತ ಭಾರತಕ್ಕಾಗಿ, ಆರೋಗ್ಯವಂತ ಯುವ ಜನತೆ ಸಜ್ಜುಗೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯ ಡಾ.ಆಸೀಫ್ ಬ್ಯಾರಿ ಮಾತನಾಡಿ, ಸೋಲು ಗೆಲುವನ್ನು ಮನದಲ್ಲಿ ಇರಿಸಿಕೊಳ್ಳದೆ ಶಿಸ್ತಿ ನೊಂದಿಗೆ ಆರೋಗ್ಯವಂತ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ನುಡಿದರು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರೆಹಮಾನ್ ವಹಿಸಿದ್ದರು.

ತಾಲೂಕು ದೈಹಿಕ ಶಿಕ್ಷಣ ಸಂಘದ ಕಾರ್ಯದರ್ಶಿ ಶ್ರೀರಾಮ ಬಡಾಕೆರೆ, ಕುಸುಮಾಕರ ಶೆಟ್ಟಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ಕುಂದಾಪುರ, ವಲಯ ಸಂಪನ್ಮೂಲ ವ್ಯಕ್ತಿ ಶ್ರೀ.ಮಂಜುನಾಥ, ಕುಂದಾಪುರ ಪುರಸಭಾ ನಾಮ ನಿರ್ದೇಶಿತ ಸದಸ್ಯ ಶ್ರೀ.ನಾಗರಾಜ್ ಕಾಂಚನ್, ಶಾಲಾ ಅಭಿವೃದ್ಧಿ ಸದಸ್ಯರುಗಳಾದ ಶ್ರೀ.ಗೋಪಾಲ್ ಪೂಜಾರಿ, ಶ್ರೀ.ಭಾಸ್ಕರ್ ಪುತ್ರನ್, ಅಬ್ದುಲ್ಲಾ ಕೋಡಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಜಿ ಕೆ.ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಶೀಲ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಮುಹಮ್ಮದ್ ಇಲಿಯಾಸ್ ವಂದಿಸಿದರು. ಕನ್ನಡ ಪ್ರಾಧ್ಯಾಪಕ ಡಾ.ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News