ಕುಂದಾಪುರ ಶಿಕ್ಷಕರ ಪ್ರಶಸ್ತಿಗೆ ತಡೆ ವಿರೋಧ: ಸಿಎಂ ಪ್ರತಿಕೃತಿ ದಹಿಸಿ ಪ್ರತಿಭಟನೆ

Update: 2024-09-06 15:18 GMT

ಉಡುಪಿ, ಸೆ.6: ಕುಂದಾಪುರದ ಶಿಕ್ಷಕರೊಬ್ಬರಿಗೆ ಅಂತಿಮಗೊಳಿಸಲಾಗಿದ್ದ ಶಿಕ್ಷಕ ಪ್ರಶಸ್ತಿಯನ್ನು ಹಿಜಾಬ್ ಪ್ರಕರಣದ ದ್ವೇಷದ ಭಾಗವಾಗಿ ತಡೆ ಹಿಡಿದಿರುವುದಾಗಿ ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ರಾಜ್ಯ ಸರಕಾರದ ಸೇಡಿನ ರಾಜಕಾರಣದ ವಿರುದ್ಧ ಇಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಮಾತನಾಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮುಖಂಡರಾದ ವೀಣಾ ಶೆಟ್ಟಿ, ಸಂದ್ಯಾ ರಮೇಶ್, ಶ್ರೀಕಾಂತ್ ನಾಯಕ್, ಕಿರಣ್ ಕುಮಾರ್, ವಿಜಯ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News