ಕುಂದಾಪುರ | ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

Update: 2024-10-01 09:47 GMT

ಕುಂದಾಪುರ: ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಇಂದು ಮಧ್ಯಾಹ ನಡೆದಿದೆ.

ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಮೃತಪಟ್ಟ ವಿದ್ಯಾರ್ಥಿ.

ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟ‌ರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News