ಕುಂದಾಪುರ: ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

Update: 2023-11-30 15:34 GMT

ಕುಂದಾಪುರ, ನ.30: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ(48) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಚಾಲಕರಾಗಿರುವ ಮಹಾಬಲ ಪೂಜಾರಿ, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಇವರ ಬೈಕಿಗೆ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಮಹಾಬಲ ಪೂಜಾರಿ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 










Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News