ಬಜೆಟ್ ಮುಗಿಸಿ ಶುಕ್ರವಾರ ಉಡುಪಿಗೆ ಭೇಟಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2023-07-06 08:30 GMT

 ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಜು.6: ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲು ನಾಳೆಯೇ (ಶುಕ್ರವಾರ) ಉಡುಪಿಗೆ ತೆರಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, 24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಮಳೆಹಾನಿ ಪರಿಹಾರಕ್ಕೆ ತೊಂದರೆ ಇಲ್ಲ ಎಂದು ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಡುಪಿಗೆ ಹೋಗಿ ಬಂದ ನಂತರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡ್ತೇನೆ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಾರ್ಡ್ ಹಾಗೂ ರೇಸನ್ ಕಾರ್ಡ್ ಕಡ್ಡಾಯ ಎಂದು ಹೇಳಿದರು.

ಶನಿವಾರ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ: ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News