ಕುಂದಾಪುರ ತಾಲೂಕಿನ ವಿವಿಧೆಡೆ ಚಿರತೆ ಪ್ರತ್ಯಕ್ಷ; ಬೋನು ಅಳವಡಿಸಿದ ಅರಣ್ಯ ಇಲಾಖೆ

Update: 2024-12-18 08:39 GMT

ಕುಂದಾಪುರ: ತಾಲೂಕಿನ ಹೊಂಬಾಡಿ-ಮಂಡಾಡಿ, ಹಾಗೂ ಹಳ್ಳಾಡಿ-ಹರ್ಕಾಡಿ ಗ್ರಾಮ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ.

ಅರಣ್ಯ ಇಲಾಖೆಯ ಮೊಳಹಳ್ಳಿ ಶಾಖೆಗೊಳಪಡುವ ಯಡಾಡಿ- ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ ಎನ್ನುವರ ಮನೆಯ ಮುಖ್ಯ ದ್ವಾರದವರೆಗೂ ಚಿರತೆ ಆಗಮಿಸಿದ್ದು, ಮಂಗಳವಾರ ಮಧ್ಯರಾತ್ರಿ ವೇಳೆ ನಡೆದ ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬುಧವಾರ ಮುಂಜಾನೆ ವೇಳೆಯೂ ಕೂಡ ಇಲ್ಲಿಗೆ ಸಮೀಪದ ಹಳ್ಳಾಡಿ-ಹರ್ಕಾಡಿ ಗರಿಕೆಮಠ, ಸಿರಿಮಠ ಎಂಬಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಕುರುಚಲು ಕಾಡು ಪ್ರದೇಶವಾಗಿರುವ ಈ ಭಾಗದಲ್ಲಿ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಆಹಾರವನ್ನರಿಸಿ ಮನೆಬಾಗಿಲಿಗೆ ಬರುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಮೊಳಹಳ್ಳಿ ಶಾಖೆಯ ಅರಣ್ಯಾಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು ಆಯಕಟ್ಟಿನ ಸ್ಥಳದಲ್ಲಿ ಬೋನು ಇರಿಸಿ ಚಿರತೆ ಸೆರೆ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News