ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

Update: 2024-09-06 14:30 GMT

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು 11ರಂದು ಅಪರಾಹ್ನ 2:00ರಿಂದ ಮದ್ಯರಾತ್ರಿ 12:00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News