ಸೆ. 26ರಂದು ನೇರ ಸಂದರ್ಶನ

Update: 2024-09-23 15:55 GMT

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆ.26ರಂದು ಬೆಳಗ್ಗೆ 10:30ಕ್ಕೆ ನಗರದ ಕಲ್ಸಂಕ ಎಂ.ಜಿ.ರಸ್ತೆ ಬಳಿಯ ಮಾಂಡೋವಿ ಟೈಮ್ಸ್‌ಸ್ಕ್ವೇರ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News