ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ
Update: 2023-08-29 15:09 GMT
ಉಡುಪಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಹಾಗೂ ವಾಸವಿ ಜಲಶಕ್ತಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ಗಳಿಂದ ವೆಬ್‌ಸೈಟ್ - kacdc.karnataka.gov.in-ನಲ್ಲಿ ಆನ್‌ಲೈಉಡನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಮೊ.ನಂ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.