ಆ.29ರಂದು ಮಧು ಬಂಗಾರಪ್ಪ ಉಡುಪಿಗೆ ಭೇಟಿ

Update: 2023-08-28 14:30 GMT

ಉಡುಪಿ, ಆ.28: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಆ.29ರ ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಪರಾಹ್ನ 3:00ಕ್ಕೆ ಮೂಡಬಿದ್ರೆಯಿಂದ ಉಡುಪಿಗೆ ಆಗಮಿಸುವ ಸಚಿವರು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡುವರು. ಬಳಿಕ ಸಂಜೆ 4:00ಕ್ಕೆ ನಗರದ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News