ಮಲ್ಪೆ | ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ನಾಲ್ವರ ಬಂಧನ

Update: 2025-03-19 14:55 IST
ಮಲ್ಪೆ | ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ನಾಲ್ವರ ಬಂಧನ
  • whatsapp icon

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ಎಂದು ಗುರುತಿಸಲಾಗಿದೆ.

ಮಾ.18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ಮಾಡಿದ್ದಾರೆ. ನಂತರ ಸ್ಥಳೀಯರು ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ತಿಳಿಸಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಉಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲನೆ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News