ಮಲ್ಪೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರ್‌ಗೆ ಸನ್ಮಾನ

Update: 2024-08-22 13:06 GMT

ಮಲ್ಪೆ : ಮಲ್ಪೆ ವಿಠೋಭ ಭಜನಾ ಮಂದಿರದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಅವರ 170ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಸಿ. ಬಂಗೇರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಲ್ಲೂರು ಶಿವರಾಮ ಶೆಟ್ಟಿ, ನಾರಾಯಣ ಗುರುಗಳ ವಿಚಾರ ಹಾಗೂ ತತ್ವದಲ್ಲಿ ನಂಬಿಕೆ ಯಿರಿಸಿಕೊಂಡು ಸಂಘವನ್ನು ಮುನ್ನಡೆಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಂಘದ ಚಟುವಟಿಕೆ ಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ದಿನೇಶ್ ಜಿ. ಸುವರ್ಣ, ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ್ ಸುವರ್ಣ, ನಾರಾಯಣ ಗುರು ಸೇವಾದಳದ ಸಂಚಾಲಕ ದೀಪಕ್ ಕೋಟ್ಯಾನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ವಾರಿಜಾ ಮಧುಸೂದನ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News