ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

Update: 2023-09-14 09:48 GMT

ಮಲ್ಪೆ, ಸೆ.14: ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುತ್ತಿದ್ದ ವೇಳೆ ಮೈಮೇಲೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಒರಿಸ್ಸಾದ ಕಾರ್ಮಿಕರಾದ ಬಾಬುಲ್ಲ(35) ಮತ್ತು ಭಾಸ್ಕರ (35) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ನಿರ್ಮಾಣವಾಗುತ್ತಿರುವ ಮನೆ ಯೊಂದಕ್ಕೆ ಕಂಟೈನರ್ ಲಾರಿಯಲ್ಲಿ ತಂದಿದ್ದ ಗ್ರಾನೈಟ್ ಇಳಿಸುತ್ತಿದ್ದಾಗ ಲಾರಿಯೊಳಗೆ ಗ್ರಾನೈಟ್ ಜಾರಿ ಮೈಮೇಲೆ ಬಿದ್ದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News