2024ನೇ ಸಾಲಿನ 'ಪಾರ್ತಿಸುಬ್ಬ ಪ್ರಶಸ್ತಿ'ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Update: 2025-01-10 06:28 GMT

ಮಾಂಬಾಡಿ ಸುಬ್ರಹ್ಮಣ್ಯ ಭಟ್

ಉಡುಪಿ, ಜ.10: ತೆಂಕುತಿಟ್ಟಿನ ಪ್ರಸಿದ್ಧ ಹಿಮ್ಮೇಳ ವಾದಕರೂ, ಯಕ್ಷಗಾನ ಗುರುಗಳೂ ಆದ ಬಂಟ್ವಾಳದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಕರ್ನಾಟಕ ಯಕ್ಷಗಾನ ಅಕಾಡಮಿ ನೀಡುವ 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಈ ವಿಷಯ ಪ್ರಕಟಿಸಿದರು.

ಇದರೊಂದಿಗೆ ಈ ಸಾಲಿನ ಅಕಾಡಮಿಯ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿಗೆ ಯಕ್ಷಗಾನ ಕಲಾವಿದರು ಹಾಗೂ ವಿದ್ವಾಂಸರ ಹೆಸರುಗಳನ್ನು ಅವರು ಪ್ರಕಟಿಸಿದರು.

ಫೆಬ್ರವರಿ 16ರಂದು ಉಡುಪಿಯ ಕಲಾರಂಗದ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

ಮಾಂಬಾಡಿ ನಾರಾಯಣ ಭಾಗವತರ ಪುತ್ರರಾದ ಸುಬ್ರಹ್ಮಣ್ಯ ಭಟ್ ಪ್ರತಿಭೆಯೊಂದಿಗೆ ತಂದೆಯ ಮಾರ್ಗದರ್ಶನದಲ್ಲಿ ಕಲಾವಿದರಾಗಿ ಅರಳಿ ಬೆಳೆದು ಕಟೀಲು, ಕರ್ನಾಟಕ, ಕದ್ರಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಅಲ್ಲದೇ ಅವರು ಕರ್ನಾಟಕ, ಕಾಸರಗೋಡು ಜಿಲ್ಲೆಗಳಲ್ಲಿ ಆಸಕ್ತರಿಗೆ ಯಕ್ಷಗಾನ ತರಬೇತಿ ನೀಡಿದ್ದರು.

ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿದೆ. ಉಳಿದಂತೆ ಐವರಿಗೆ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಐವರಿಗೆ ಗೌರವ ಪ್ರಶಸ್ತಿ: 2024ನೇ ಸಾಲಿನ ಗೌರವ ಪ್ರಶಸ್ತಿಗೆ ಬೆಳ್ತಂಗಡಿಯ ಕೊಳ್ತಿಗೆ ನಾರಾಯಣ ಗೌಡ, ಕುಂದಾಪುರದ ಕೋಡಿ ವಿಶ್ವನಾಥ ಗಾಣಿಗ, ಬಂಟ್ಚಾಳದ ರಾಘವ ದಾಸ್, ಬಂಟ್ವಾಳದ ಸುಬ್ರಾಯ ಹೊಳ್ಳ, ತುಮಕೂರಿನ ಕಾಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ.

10 ಕಲಾವಿದರಿಗೆ ಯಕ್ಷಸಿರಿ ಪ್ರಶಸ್ತಿ: ಕಾಸರಗೋಡಿನ ಅಡ್ಕ ಗೋಪಾಲಕೃಷ್ಣ ಭಟ್, ಜಗನ್ನಾಥ ಆಚಾರ್ಯ ಎಳ್ಳಂಪಳ್ಳಿ, ಮವ್ವಾರು ಬಾಲಕೃಷ್ಣ ಮಣಿಯಾಣಿ ಹಾಸ್ಯಗಾರ, ಕಾಸರಗೋಡು, ಉಮೇಶ್ ಕುಪ್ಪೆಪದವು ಮಂಗಳೂರು, ಶಿವಾನಂದ ಗೀಜಗಾರು, ಸ್ತ್ರೀ ವೇಷಧಾರಿ, ಶಿವಮೊಗ್ಗ.

ಮುಗ್ವಾ ಗಣೇಶ್ ನಾಯ್ಕ ಹೊನ್ನಾವರ, ಸುರೇಂದ್ರ ಮಲ್ಲಿ ಮಂಗಳೂರು, ಅಂಡಾಲ ದೇವಿಪ್ರಸಾದ ಶೆಟ್ಟಿ ಮಂಗಳೂರು, ಕೃಷ್ಣಪ್ಪ ಮೂಡಲಪಾಯ ಯಕ್ಷಗಾನ, ಬೆಂಗಳೂರು ಗ್ರಾಮಾಂತರ, ಹಳುವಳ್ಳಿ ಜ್ಯೋತಿ ಚಿಕ್ಕಮಗಳೂರು.

ದತ್ತಿ ನಿಧಿ ಪ್ರಶಸ್ತಿ: 2024ನೇ ಸಾಲಿನ ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿಗೆ ಕರ್ಗಲ್ಲು ವಿಶ್ವೇಶ್ವರ ಭಟ್ಟ, ಬಂಟ್ವಾಳ ಆಯ್ಕೆಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News