ಮಂಗಳೂರು ವಿವಿ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಎಂಜಿಎಂಗೆ ಪ್ರಶಸ್ತಿ

Update: 2023-11-08 14:06 GMT

ಉಡುಪಿ, ನ.8: ಉಡುಪಿ ಎಂಜಿಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾಟ ದಲ್ಲಿ ಉಡುಪಿ ಎಂಜಿಎಂ ಕಾಲೇಜು ತಂಡ ಪ್ರಥಮ ಸ್ಥಾನ ಗೆದ್ದುಕೊಂಡಿದೆ.

ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ 23ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪುರುಷರ ವಿಭಾಗದಲ್ಲಿ ಎಂಜಿಎಂ ತಂಡವು ಫೈನಲ್‌ನಲ್ಲಿ ಮಂಗಳೂರಿನ ಸೈಂಟ್ ಆಲೋಷಿಯಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಗೆಲುವನ್ನು ಸಾಧಿಸಿ ಪ್ರಶಸ್ತಿ ಪಡೆದುಕೊಂಡಿದೆ.

ಮಹಿಳಾ ವಿಭಾಗದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ತಂಡವು ಎಂಜಿಎಂ ಮಹಿಳಾ ತಂಡವು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪಂದ್ಯಾಕೂಟದ ಅತ್ಯುತ್ತಮ ಪುರುಷ ಆಟಗಾರ ಪ್ರಶಸ್ತಿಯನ್ನು ಎಂಜಿಎಂ ಕಾಲೇಜು ತಂಡದ ಸೃಜನ್ ಹಾಗೂ ಮಹಿಳಾ ವಿಭಾಗದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್‌ನ ಪ್ರೇಕ್ಷಾ ಗಳಿಸಿದರು. 



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News