ಮಣಿಪಾಲ: ರೇಡಿಯೋ ಮಣಿಪಾಲ್ ಆ್ಯಪ್ ಲೋಕಾರ್ಪಣೆ

Update: 2023-08-13 13:00 GMT

ಮಣಿಪಾಲ: ಸಮುದಾಯ ಬಾನಲಿ ಕೇಂದ್ರಗಳ ಮೂಲಕ ನಮ್ಮ ಸುತ್ತಮುತ್ತಲಿನ ಜನರಿಗೆ ತಿಳುವಳಿಕೆ ಮೂಡಿಸುವ ಕೆಲಸ ವಾಗಬೇಕು. ಅಲ್ಲದೆ ಸ್ಥಳೀಯ ಪ್ರತಿಭಾನ್ವಿತರಿಗೆ ಅವಕಾಶ ಸಿಗುವಂತಾಗಬೇಕು ಎಂದು ಮಣಿಪಾಲ ಮಾಹೆ ವಿಶ್ವವಿದ್ಯಾ ನಿಲಯದ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹೇಳಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ಮತ್ತು ರೇಡಿಯೋ ಮಣಿಪಾಲ್ ಇತ್ತೀಚೆಗೆ ಮಣಿಪಾಲ ಎಂ.ಐ.ಸಿಯಲ್ಲಿ ಆಯೋಜಿಸಿದ ರೇಡಿಯೋ ಮಣಿಪಾಲ್ ಆಪ್ ಲೋಕಾ ರ್ಪಣೆ ಹಾಗೂ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಿ ಅವರು ಮಾತನಾಡುತಿದ್ದರು.

ಯುವ ಜನತೆ ಮಕ್ಕಳು ಸಮುದಾಯ ಬಾನುಲಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಗೆಲುವು ಸಾಧಿಸುವುದಕ್ಕಿಂತ ಭಾಗವಹಿಸುವುದು ಅತ್ಯಗತ್ಯ. ದೇಶಾಭಿಮಾನ ಮೂಡಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣವಾಗಬೇಕು ಎಂದು ಅವರು ತಿಳಿಸಿದರು.

ರೇಡಿಯೋ ಮಣಿಪಾಲದ ಸಹಾಯಕ ಪ್ರಾಧ್ಯಾಪಕಿ ಮತ್ತು ಸಂಯೋಜಕಿ ಡಾ.ರಶ್ಮಿ ಅಮ್ಮೆಂಬಳ ಮಾತನಾಡಿ, ರೇಡಿಯೋ ಮಣಿಪಾಲ ಆಪ್ ಮೂಲಕ ಸಮುದಾಯದ ಸಹಕಾರದೊಂದಿಗೆ ನಿರ್ಮಾಣಗೊಳ್ಳುತ್ತಿರುವ ರೇಡಿಯೋ ಮಣಿಪಾಲದ ಕಾರ್ಯಕ್ರಮಗಳು ಜಗತ್ತಿನಾದ್ಯಂತ ಕೇಳುವುದಕ್ಕೆ ’ರೇಡಿಯೋ ಮಣಿಪಾಲ್ ಆಪ್ ಸಹಾಯವಾಗಲಿದೆ. ಇದು ಆಂಡ್ರಾಯ್ಡ್ ಮತ್ತು ಐಫೋನ್ ಗಳಲ್ಲಿ ಲಭ್ಯ ಎಂದರು.

ಮಾಧ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥೆ ಶುಭ ಎಚ್.ಎಸ್. ಸ್ವಾಗತಿಸಿದರು. ಕಾರ್ಯಕ್ರಮ ನಿರ್ಮಾಣ ಸಹಾಯಕ ಮಂಜುನಾಥ್ ಹಿಲಿಯಾಣ ವಂದಿಸಿದರು. ವಿದ್ಯಾರ್ಥಿನಿ ಲೆರಿಸ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News