ಮಣಿಪಾಲ| ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವೈದ್ಯನ ಬಂಧನ

Update: 2024-09-03 20:47 IST
ಮಣಿಪಾಲ| ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವೈದ್ಯನ ಬಂಧನ
  • whatsapp icon

ಉಡುಪಿ: ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಮಹಿಳಾ ಠಾಣೆಯ ಪೊಲೀಸರು ವೈದ್ಯನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ ವಿದ್ಯಾಭ್ಯಾಸ ಮಾಡುತಿದ್ದ ದೆಹಲಿ ಮೂಲದ ಡಾ. ಮುಹಮ್ಮದ್ ದಾನಿಶ್ ಖಾನ್(27) ಬಂಧಿತ ಆರೋಪಿ. ಈತ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಮೊಬೈಲ್ ಚಾಟ್ ಮಾಡುತ್ತಿದ್ದು, ನಂತರ ಮದುವೆ ಪ್ರಸ್ತಾಪ ಮುಂದಿಟ್ಟು ಜ.22ರಂದು ಆತನ ರೂಮಿಗೆ ಕರೆದು ಅವಹೇಳನಕಾರಿಯಾಗಿ ಮಾತನಾಡಿರುವುದಾಗಿ ದೂರಲಾಗಿದೆ.

ಎ.17ರಂದು ಆರೋಪಿ ತನ್ನ ರೂಮಿನಲ್ಲಿ ಇಬ್ಬರ ಮಧ್ಯೆ ಮದುವೆ ವಿಚಾರ ವಾಗಿ ಮಾತುಕತೆಯಾಗಿದ್ದು, ಆ ಸಂದರ್ಭದಲ್ಲಿ ಆರೋಪಿ ಆಕೆಯನ್ನು ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದು, ಆಕೆ ನಿರಾಕರಿಸಿದಾಗ ಆರೋಪಿ ಆಕೆಗೆ ಹೊಡೆದು ಲೈಂಗಿಕ ಕಿರುಕುಳ ನೀಡಿ ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News