ಸೆ.15ರಂದು ಸಂವಿಧಾನ ಪೀಠಿಕೆ ಸಾಮೂಹಿಕ ಓದು; ಉಡುಪಿ ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ನೋಂದಾಣಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ : ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಸೆ.15ರಂದು ಬೆಳಗ್ಗೆ 10ಗಂಟೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆ ರೂಪಿಸ ಲಾಗಿದ್ದು, ಈ ಸಂಬಂಧ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಉಡುಪಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಜ್ಜರಕಾಡು ಕ್ರೀಡಾಂಗಣದಲ್ಲಿ ಬೆಳಗ್ಗೆ ೧೦ಗಂಟೆಗೆ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು ೫೦೦೦ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಸರಕಾರಿ, ಅನು ದಾನಿತ ಹಾಗೂ ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳು, ಮಣಿಪಾಲ ಮಾಹೆ, ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿ ಗಳು, ಗ್ರಾಪಂ ಕೇಂದ್ರಗಳಲ್ಲಿ ಸಿಬ್ಬಂದಿ, ಸಾರ್ವಜನಿಕರು, ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕಾರ್ಮಿಕರು, ನೌಕರರು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸಂಬಂಧಪಟ್ಟವರು www.thepreamble-swdkar.in
ಮನೆಮನೆ ಆರೋಗ್ಯ ಕಾಪಾಡುವ ಹಾಗೂ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುವ ಉದ್ದೇಶದಿಂದ ಕೇಂದ್ರ ಸರಕಾರ ಹಮ್ಮಿಕೊಳ್ಳಲಾಗಿರುವ ಆಯುಷ್‌ಮಾನ್ ಭವ ಕಾರ್ಯಕ್ರಮಕ್ಕೆ ಸೆ.೧೩ರಂದು ಚಾಲನೆ ನೀಡಲಾಗು ತ್ತದೆ. ಈ ಕಾರ್ಯಕ್ರಮವು ಒಟ್ಟು ಮೂರು ಹಂತಗಳಲ್ಲಿ ನಡೆಯ ಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಮೊದಲ ಹಂತದಲ್ಲಿ ಆಯುಷ್‌ಮಾನ್ ಆಪ್ ಕೇ ದ್ವಾರ್ ೩.೦ ಕಾರ್ಯ ಕ್ರಮ ಸೆ.೧೭ರಿಂದ ಜಿಲ್ಲೆಯಾದ್ಯಂತ ನಡೆಯಲಿದೆ. ಇದರಲ್ಲಿ ಆಯುಷ್‌ಮಾನ್ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ನಡೆಸಲಾಗುತ್ತದೆ. ಎರಡನೆ ಹಂತದಲ್ಲಿ ಆಯುಷ್‌ಮಾನ್ ಮೇಳ ಸೆ.೧೭ರಿಂದ ನಡೆಯಲಿದೆ. ಅದರಂತೆ ಸಮುದಾಯ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಆರೋಗ್ಯ ಮೇಳಗಳನ್ನು ನಡೆಸಲಾಗುವುದು ಎಂದರು.
ಸೆ.೧೭ರಿಂದ ನಾಲ್ಕು ಮಂಗಳವಾರ ಮೇಳಗಳನ್ನು ನಡೆಸಲಾಗುತ್ತದೆ. ಮೊದಲ ಮಂಗಳವಾರ ಅಸಂಕ್ರಾಮಿಕ ರೋಗ ಗಳ ತಪಾಸಣೆ, ಎರಡನೇ ಮಂಗಳವಾರ ಸಾಂಕ್ರಾಮಿಕ ರೋಗಗಳ ತಪಾಸಣೆ, ಮೂರನೇ ಮಂಗಳವಾರ ತಾಯಿ ಮತ್ತು ಮಕ್ಕಳ ಪೋಷಣಾ ಚಟುವಟಿಕೆ, ನಾಲ್ಕನೇ ಮಂಗಳವಾರ ಜಿಲ್ಲೆಯ ವಿಶೇಷ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ಮೂರನೇ ಹಂತದಲ್ಲಿ ಆಯುಷ್‌ಮಾನ್ ಸಭಾ ಕಾರ್ಯಕ್ರಮ ಅ.೨ರಂದು ನಡೆಸಲಾಗುತ್ತದೆ. ಅದರಂತೆ ಗ್ರಾಪಂಗಳು ಗ್ರಾಮ ಸಭೆಗಳನ್ನು ಕರೆದು ಜನರಿಗೆ ಆರೋಗ್ಯ ಬಗ್ಗೆ ಮಾಹಿತಿ ನೀಡಲಾಗುವುದು. ಇದರೊಂದಿಗೆ ಸ್ವಚ್ಛತಾ ಆಂದೋಲನದ ಮಾಹಿತಿ, ರಕ್ತದಾನ ಶಿಬಿರ, ಅಂಗಾಂಗ ದಾನದ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಓ ಎಚ್.ಪ್ರಸನ್ನ, ಡಿವೈಎಸ್ಪಿ ದಿನಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಉಪಸ್ಥಿತರಿದ್ದರು.