ದೇವರು ಆಲಯ ಸೇರುವುದರೊಂದಿಗೆ ಶ್ರೇಯಸ್ಸು: ಪಲಿಮಾರು ಶ್ರೀ

Update: 2024-03-23 18:40 GMT

ಮಲ್ಪೆ: ದೇವಸ್ಥಾನದ ಜೀರ್ಣೋದ್ದಾರಕ್ಕೆ ಇಡೀ ಊರಿಗೆ ಊರೇ ಸಂಭ್ರಮಿಸುತ್ತದೆ. ದೇವರು ಮತ್ತೆ ಆಲಯ ಸೇರುವುದರೊಂದಿಗೆ ಎಲ್ಲರಿಗೂ ಶ್ರೇಯಸ್ಸಾಗುತ್ತದೆ. ದೇವರ ಅನುಗ್ರಹ ದೇವಸ್ಥಾನಕ್ಕೆ ದುಡಿದ ಎಲ್ಲರಿಗೂ ಸಿಗುವಂತಾಗಲಿ ಎಂದು ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಅವರು ಶುಕ್ರವಾರ ವಡಭಾಂಡೇಶ್ವರ ಶ್ರೀವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ವಿದ್ವಾನ್ ರವೀಂದ್ರ ಭಟ್ ಹೆರ್ಗ ಧಾರ್ಮಿಕ ಪ್ರವಚನ ನೀಡಿದರು.

ನಿವೃತ್ತ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ಧರ್ಮದರ್ಶಿ ಆನಂದ ಸಿ.ಕುಂದರ್, ಉದ್ಯಮಿಗಳಾದ ಆನಂದ ಪಿ.ಸುವರ್ಣ, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಬಡಾನಿಡಿ ಯೂರು ಗ್ರಾಪಂ ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ, ಮಲ್ಪೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ.ಬಂಗೇರ, ಧಾರ್ಮಿಕ ಚಿಂತಕ ಪ್ರೊ.ಪವನ್ ಕಿರಣ್, ನಗರಸಭಾ ಸದಸ್ಯೆ ಲಕ್ಷ್ಮೀ ಮಂಜುನಾಥ್ ಕೊಳ, ಬೆಳ್ಳಳೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಟಿ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಪ್ರಧಾನ ಕಾರ್ಯದರ್ಶಿ ಶಶಿಧರ್ ಅಮೀನ್ ಅವರನ್ನು ಗೌರವಿಸಲಾಯಿತು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೂಲಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ.ಕೊಡವೂರು ಉಪಸ್ಥಿತರಿದ್ದರು. ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಉಗ್ಗೆಲ್‌ಬೆಟ್ಟು ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News