ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-08-15 14:00 IST
ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ಲಕ್ಷ್ಮೀ ಹೆಬ್ಬಾಳ್ಕರ್

  • whatsapp icon

ಉಡುಪಿ : ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದ್ದು, ಎಂದಿನಂತೆ ಯಥಾವತ್ತಾಗಿ ಮುಂದುವರಿಯಲಿದೆ. ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾಪ‌ ಸರಕಾರದ ಮುಂದೆ ಇಲ್ಲ. ಸರಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಹೇಳಿದರು.

ಕಳೆದ ವಿಧಾನ ಸಭೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳು ಮುಂದುವರಿಯಲಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರೂ ಅನ್ಯತಾ ವ್ಯಾಖ್ಯಾನಿಸಬಾರದು. ಪರಿಷ್ಕರಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರು ಮಾತನಾಡಿರಲಿಕ್ಕಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಎಲ್ಲರ ಧ್ವನಿಯೂ ಒಂದೇ, ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಅಂತ. ಚುನಾವಣೆಗಾಗಿ ಸ್ವಾರ್ಥದ ರಾಜಕಾರಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 200 ಕೋಟಿಯಷ್ಟು ಹಾನಿ :

ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ 200 ಕೋಟಿ ರೂ.ನಷ್ಟು ಹಾನಿಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲಾಡಳಿತದ ಬಳಿ ಇರುವ ಅನುದಾನದಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ವಿಶೇಷ ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News