ಕಾಪು: ಅಪಘಾತದಿಂದ ಗಾಯಗೊಂಡಿದ್ದ ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-09-02 13:33 GMT

ಕಾಪು, ಸೆ.2: ವಾಹನ ಢಿಕ್ಕಿ ಹೊಡೆದು ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ

ಉಚ್ಚಿಲ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಸಹಕಾರಿ ಮಹಲ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವರು, ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಯೋರ್ವನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ  ರಸ್ತೆಯಲ್ಲೆ ಬಿದ್ದು ನರಳುತ್ತಿದ್ದನು. ದಾರಿ ಮಧ್ಯೆ ವಿದ್ಯಾರ್ಥಿಯ ನರಳಾಟವನ್ನು ಕಂಡ ಸಚಿವರು, ತಕ್ಷಣವೇ ಕಾರನ್ನು ನಿಲ್ಲಿಸಿ, ಆತನಿಗೆ ಉಪಚರಿಸಿ, ಬಳಿಕ ಅಲ್ಲಿಯೇ ನಿಂತಿದ್ದ ಆಟೋ ವೊಂದರಲ್ಲಿ ವಿದ್ಯಾರ್ಥಿಯನ್ನು ಕೂರಿಸಿ ಆಸ್ಪತ್ರೆಗೆ ಸಾಗಿಸಿದರು. ಸಚಿವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕಳೆದ ಸೋಮವಾರ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೆರವಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News