ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಂ.ಎಲ್. ಸಾಮಗ ಆಯ್ಕೆ

Update: 2025-03-29 21:12 IST
ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಂ.ಎಲ್. ಸಾಮಗ ಆಯ್ಕೆ
  • whatsapp icon

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ. ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎಂ.ಎಲ್.ಸಾಮಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿಕ್ಷಣ ತಜ್ಞ, ಯಕ್ಷಗಾನ ಕಲಾವಿದ, ವಾಗ್ಮಿ, ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಪ್ರೊ.ಮಲ್ಪೆ ಲಕ್ಷ್ಮೀನಾರಾಯಣ ಸಾಮಗರನ್ನು ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು ಹಾಗು ರಂಜನಿ ವಸಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News