ಉಡುಪಿಯಲ್ಲಿ ತಾಯಿ, ಮಕ್ಕಳ ಕೊಲೆ ಪ್ರಕರಣ: ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಮನವಿ

Update: 2023-12-15 13:14 GMT

ಉಡುಪಿ, ಡಿ.15: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ನಿಯೋಗವೊಂದು ಇಂದು ಉಡುಪಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ ಅನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯ ವನ್ನು ಸ್ಥಾಪಿಸಬೇಕು. ಸಂತ್ರಸ್ತ ಕುಟುಂಬದ ನೂರ್ ಮುಹಮ್ಮದ್ ಅವರ ಮಗ ಅಸಾದ್ ಅವರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ನೀಡಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.

ನಿಯೋಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ಡಿ.ಕೆ.ಅಶೋಕ್, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಮುಖಂಡರಾದ ಉದಯ ಕುಮಾರ್ ಮುನಿಯಾಲು, ವಿಘ್ನೇಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ ಕಾರ್ಕಳ, ಪ್ರಭಾಕರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.








Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News