ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Update: 2023-10-06 15:13 GMT

ಉಡುಪಿ : ಮೈಸೂರು ದಸರಾ ಉತ್ಸವ-2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ ೧೫ರಿಂದ ೨೩ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023 ಅನ್ನು ಮೈಸೂರಿನ ಹಳೆಯ ಡಿ.ಸಿ. ಆಫೀಸ್ ಪಕ್ಕದ ಓವಲ್ ಗ್ರೌಂಡ್‌ನಲ್ಲಿ ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರು ಭಾಗವಹಿಸಬಹುದಾಗಿದೆ.

ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ - https://kpp.karnataka.gov.in-ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್ ೧೨ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ -kannadappradhikara@gmail.com-ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ. ಸಂಖ್ಯೆ: 080-22484516, 22107704 ಅನ್ನು ಸಂಪರ್ಕಿಸಬಹುಉದ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News