ಪಡುಬಿದ್ರಿ | ಬೈಕ್ ಗೆ ಬಸ್ಸು ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2023-09-13 06:24 GMT
ಪಡುಬಿದ್ರಿ: ಬೈಕ್ ಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಂದಿಕೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮೃತ ಬೈಕ್ ಸವಾರನನ್ನು ಕಾರ್ಕಳದ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ನಂದಿಕೂರು-ಮುದರಂಗಡಿ ತಿರುವಿನಲ್ಲಿ ಈ ಅಪಘಾತ ನಡೆದಿದೆ. ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅದಾಗಲೇ ಆತ ಮೃತಪಟ್ಟಿದ್ದು, ಪ್ರಕರಣ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.