ಅ. 31ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ
ಉಡುಪಿ, ಅ.30: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಹಾಗೂ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ, ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಅಕ್ಟೋಬರ್ 31ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಎಂಐಟಿ ಕ್ಯಾಂಪಸ್‌ನಲ್ಲಿರುವ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನುಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ವೀಣಾ ಕುಮಾರಿ, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ.ರಂಗ ಪೈ, ಮಣಿಪಾಲ ಎಂಎಸ್‌ಡಿಸಿ ಅಧ್ಯಕ್ಷ ಹಾಗೂ ರಿಜಿಸ್ಟ್ರಾರ್ ಡಾ. ರಾಧಾಕೃಷ್ಣ ಎಸ್ ಐತಾಳ್, ಕೆಎಂಸಿ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಶಮ್ಮಿ ಶಾಸ್ತ್ರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷ ಧನುಷ್ ಕೆ. ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.