ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ನಾಪತ್ತೆ

Update: 2023-10-03 14:17 GMT

ಉಡುಪಿ, ಅ.3: ಕಾರ್ಕಳ ತಾಲೂಕು ದುರ್ಗ ಗ್ರಾಮದ ಮಲೆಹಿತ್ಲು ನಿವಾಸಿ ಸಂದೇಶ ಶೆಟ್ಟಿ (30) ಎಂಬ ಯುವಕ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟಂಬರ್ 30ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆ ಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News