ಯುವತಿ ನಾಪತ್ತೆ

Update: 2023-10-04 15:03 GMT

ಉಡುಪಿ, ಅ.4: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News