ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆಗೆ ಆದ್ಯತೆ ನೀಡಿ: ಉಡುಪಿ ಜಿಲ್ಲಾಧಿಕಾರಿ

Update: 2023-10-11 14:43 GMT

ಉಡುಪಿ, ಅ.11: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವ ದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9:00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ.

ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾರ್ಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ವಿವಿಧ ಸಾಂಸ್ಕೃ ತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆ ಗಳ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಿ ಬರಲಿವೆ ಎಂದರು.

ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿ ಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಗರಸಭೆ ಪೌರಾಯುಕ್ತ ರಾಯಪ್ಪ, ಡಿಡಿಪಿಐ ಗಣಪತಿ ಕೆ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿ ಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News