ಸಾಂತ್ವನ ಯೋಜನೆ: ಅರ್ಜಿ ಆಹ್ವಾನ

Update: 2023-11-22 14:25 GMT

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಕೋಮು ಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭದಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಟ 2 ಲಕ್ಷ ರೂ. ನಷ್ಟಕ್ಕೆ ವಿಶೇಷ/ದುರ್ಬಲ ವರ್ಗದ ಫಲಾನುಭವಿಗಳಿಗೆ ಸಾಂತ್ವನ ಯೋಜನೆಯಡಿ ಗರಿಷ್ಟ 5 ಲಕ್ಷ ರೂ.ಗಳ ಘಟಕ ವೆಚ್ಚಕ್ಕೆ ಶೇ.೫೦ರಷ್ಟು ಸಹಾಯಧನ ಮತ್ತು ಶೇ.೩ರ ಬಡ್ಡಿ ದರದಲ್ಲಿ ಶೇ.50ರಷ್ಟು ಸಾಲವನ್ನು ನೀಡಲಾಗುವುದು.

ಈ ಯೋಜನೆಯಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್- https://kmdconline.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಆನ್‌ಲೈನ್ ಅರ್ಜಿಯ ಹಾರ್ಡ್‌ಕಾಪಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಇಲ್ಲಿರುವ ಜಿಲ್ಲಾ ಕಛೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:0820-2574990 ಅಥವಾ ಉಡುಪಿ ದೂ. ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ:08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News