ಕೊಳವೆ ಬಾವಿಗಾಗಿ ಅರ್ಜಿ ಆಹ್ವಾನ
Update: 2023-11-22 15:43 GMT
ಉಡುಪಿ : ಉಡುಪಿ ನಗರಸಭಾ ವ್ಯಾಪಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿರುವ ಬಜೆ ಡ್ಯಾಂನಲ್ಲಿ ಬೇಸಿಗೆ ಆರಂಭ ವಾದ ಹಿನ್ನೆಲೆಯಲ್ಲಿ ನೀರಿನ ಶೇಖರಣಾ ಮಟ್ಟ ಕುಸಿಯುವ ಸಂಭವವಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಮಾಡಬೇಕಾಗಿರುವುದರಿಂದ ನಳ್ಳಿ ನೀರಿನ ಸಂಪರ್ಕ ಹಾಗೂ ಕೊಳವೆ ಬಾವಿ ಕೊರೆಯುವ ಬಗ್ಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರಸಭಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.