ಕಾರ್ಕಳ: ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ

Update: 2024-01-07 15:22 GMT

ಕಾರ್ಕಳ: ಶೇಖರ್ ಅಜೆಕಾರು ಸಾಹಿತ್ಯ ಸಮ್ಮೇಳನ ಸಂಘಟಿಸುವ  ಮೂಲಕ ಕನ್ನಡ ಉಳಿಸುವ ಕಾರ್ಯವನ್ನು ಮಾಡಿದ್ದಾರೆ ಮಾಡಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ರವಿವಾರ ಕಾರ್ಕಳ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಹಿತ್ಯ ಕ್ಷೇತ್ರದಲ್ಲಿ  ಮಕ್ಕಳು  ಯುವಕರಿಗೆ ಸಾಹಿತ್ಯ ಪಾಠವನ್ನು ನೀಡುವ ವಿಪುಲವಾದ ಮನೋಭಾವ ಅವರಲ್ಲಿತ್ತು. ಸಾಹಿತ್ಯ  ಧರ್ಮವೆ ಅವರ ಉಸಿರಾಗಿತ್ತು  ಎಂದರು.

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ (ರಿ.) ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ, ಬಜಗೋಳಿ ಪ್ರಸ್ತಾವಿಕ ಮಾತನಾಡಿ ಕಾಲಕಾಲಕ್ಕೆ ಸಮಾಜಕ್ಕೆ ವರದಿ ಮಾಡುವುದರ ಜೊತೆಗೆ ಒಂದು ರೀತಿಯ ಜನಾಭಿಪ್ರಾಯ ಮೂಡಿಸುವಲ್ಲಿಯೂ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದರು

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್  ಅಧ್ಯಕ್ಷ ಸುಧಾಕರ ಶೆಟ್ಟಿ ಮಾತನಾಡಿ  ಸಮಾಜದ ಓರೆಕೋರೆಯನ್ನು ತಿದ್ದುವ ಕೆಲಸ ಪತ್ರಕರ್ತರಿಂದ ಸಾಧ್ಯವಾಗಿದೆ. ಪತ್ರಕರ್ತ ಶೇಖರ್ ಅಜೆಕಾರು ಅವರ ಸಾಹಿತ್ಯ  ಪ್ರೇಮ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು

ನ್ಯಾಯವಾದಿ ಎಂ ಕೆ ವಿಜಯಕುಮಾರ್ ಮಾತನಾಡಿ ಸರಕಾರವು ಪತ್ರಕರ್ತರ ನಿಧಿ ಸ್ಥಾಪಿಸಿ  ಅವರ ಕುಟುಂಬಕ್ಕೆ  ನೆರವಾಗಬೇಕು ಎಂದರು.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿ, ಶೇಖರ್ ಅಜೇಕಾರ್ ಕುಟುಂಬಕ್ಕೆ ಧನ ಸಹಾಯದ ಜೊತೆಗೆ ಅವರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡುವ ಭರವಸೆಯಿತ್ತರು.

ಪತ್ರಕರ್ತ ವಸಂತ ಕುಮಾರ್ ಉಪಸ್ಥಿತರಿದ್ದರು. ಕಾರ್ಕಳ ಕಸಾಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿದರು. 

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಧನ್ಯವಾದ ವಿತ್ತರು. ಸುರೇಶ್ ಬಜಗೋಳಿ  ಕಾರ್ಯಕ್ರಮ ನಿರೂಪಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News