ಹೂಡೆ ಸಾಲಿಹಾತ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಉಡುಪಿ, ಜೂ.29: ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸೆಸೆಲ್ಸಿ ಹಾಗೂ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಯುಎಫ್ಟಿ ಮಾಲಕ ಇಬ್ರಾಹೀಂ ಸಾಹೇಬ್ ನೇಜಾರ್ ಸನ್ಮಾನಿಸಿದರು. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಅಧ್ಯಕ್ಷ ಡಾ.ಶಹನವಾಝ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಉದ್ದೇಶ ಇಟ್ಟುಕೊಂಡು ಶಿಕ್ಷಣ ಪಡೆಯದೇ, ಜೀವನದಲ್ಲಿ ಒಳ್ಳೆಯ ನಡೆ ನುಡಿಗಳನ್ನು ಹೊಂದಿ ಸಮಾಜಕ್ಕೆ ಪ್ರೇರಕ ಶಕ್ತಿಯಾಗಿ ಬೆಳೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಟ್ರಸ್ಟ್ ನ ಹಿರಿಯ ಸದಸ್ಯ ಮೌಲಾನ ಆದಂ ಸಾಹೇಬ್ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಹಿತೈಷಿಗಳಾದ ಉಮ್ಮರ್ ಸಾಹೇಬ್, ರಶೀದಾ ಉಮರ್, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಸಬೀನಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿವ್ಯಾ ಪೈ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುನಂದಾ, ಅರೇಬಿಕ್ ಕಾಲೇಜಿನ ಮುಖ್ಯಸ್ಥೆ ಕುಲ್ಸೂಮ್ ಅಬೂಬಕರ್ ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಲ್ಫಾ ಪ್ರಾರ್ಥನೆಗೈದರು. ವಿದ್ಯಾರ್ಥಿನಿ ಅಝ್ಕಾ ಅರ್ಶದ್ ಸ್ವಾಗತಿಸಿದರು. ವಿದ್ಯಾರ್ಥಿನಿ ಆಯೆಷಾ ಫಾತಿಮಾ ವಂದಿಸಿದರು. ವಿದ್ಯಾರ್ಥಿನಿ ನಾಝ್ ಹನೀಫ್ ಕಾರ್ಯಕ್ರಮ ನಿರೂಪಿಸಿದರು.