ಆಗುಂಬೆಗೆ ಪರ್ಯಾಯವಾಗಿ ಸುರಂಗ ಮಾರ್ಗ: ಕೇಂದ್ರ ಸಚಿವರಿಗೆ ಮನವಿ

Update: 2024-07-01 15:03 GMT

ಉಡುಪಿ, ಜು.1: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಜೈರಾಂ ಗಡ್ಕರಿ ಅವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರ ವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು.

ಕುಂದಾಪರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರಿ ನಿಂದ ವಿವಿಧೋದ್ದೇಶ ಬಂದರಿನ ವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ, ಬೈಂದೂರಿನಿಂದ ರಾಣಿ ಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.

ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಈ ಕಾಮಗಾರಿಗಳ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News