ಪುಸ್ತಕ ಬಹುಮಾನ: ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

Update: 2024-07-03 15:50 GMT

ಉಡುಪಿ, ಜು.3: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ 25,000ರೂ.ಬಹುಮಾನ ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ‌್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಸಲ್ಲಿಸಬಹುದಾಗಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು. ಸ್ವರಚಿತವಾಗಿರಬೇಕು ಮತ್ತು ಪ್ರಥಮ ಮುದ್ರಣದ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ ರಸ್ತೆ, ಬೆಂಗಳೂರು 560002 ಇವರಿಗೆ ಜುಲೈ 25ರ ಒಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಕಛೇರಿಯ ದೂ.ಸಂಖ್ಯೆ:0820-2986168ನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News